274 ಸಹ ಪ್ರಾಧ್ಯಾಪಕರಿಗೆ ಪ್ರೊಫೆಸರ್‍‌ ಹುದ್ದೆಗೆ ಬಡ್ತಿ: ಅಶ್ವತ್ಥನಾರಾಯಣ.

Karnataka

Oct 29, 2023 - 11:27
 0  74
274 ಸಹ ಪ್ರಾಧ್ಯಾಪಕರಿಗೆ ಪ್ರೊಫೆಸರ್‍‌ ಹುದ್ದೆಗೆ ಬಡ್ತಿ: ಅಶ್ವತ್ಥನಾರಾಯಣ.

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರುಗಳಿಗೆ (ಅಸೋಸಿಯೇಟ್‌ ಪ್ರೊಫೆಸರ್‍ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರಕಾರವು ನಿರ್ಧರಿಸಿದೆ. ಈ ಸಂಬಂಧವಾಗಿ ಬುಧವಾರ (ಡಿ.14) ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ

ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರುಗಳಿಗೆ (ಅಸೋಸಿಯೇಟ್‌ ಪ್ರೊಫೆಸರ್‍ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರಕಾರವು ನಿರ್ಧರಿಸಿದೆ. ಈ ಸಂಬಂಧವಾಗಿ ಬುಧವಾರ (ಡಿ.14) ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ

ಈ ಬಗ್ಗೆ ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರಕಾರದ ಈ ನಿರ್ಧಾರದಿಂದ 274 ಸಹ ಪ್ರಾಧ್ಯಾಪಕರಿಗೆ ಮುಂಬಡ್ತಿ ಸಿಗಲಿದೆ. ಉನ್ನತ ಶಿಕ್ಷಣ ಇಲಾಖೆಯ ಭಾಗವಾಗಿರುವ ವೃತ್ತಿ ಸುಧಾರಣೆ ಆಯ್ಕೆ ಸಮಿತಿಯ ತೀರ್ಮಾನದ ಮೇಲೆ ಈ ಹೆಜ್ಜೆ ಇಡಲಾಗುತ್ತಿದೆ ಎಂದಿದ್ದಾರೆ.

ಯುಜಿಸಿ ಸಹ ಪ್ರಾಧ್ಯಾಪಕರಿಗೆ ಪ್ರೊಫೆಸರ್‍‌ಗಳಾಗಿ ಬಡ್ತಿ ನೀಡಬಹುದೆಂದು 2010ರಲ್ಲೇ ಹೇಳಿದೆ. ಆದರೆ ಕಳೆದ 12 ವರ್ಷಗಳಿಂದ ಈ ವಿಚಾರದಲ್ಲಿ ಯಾವ ಪ್ರಗತಿಯೂ ಆಗಿರಲಿಲ್ಲ. ಈಗ ಸರಕಾರವು 274 ಅಸೋಸಿಯೇಟ್‌ ಪ್ರೊಫೆಸರುಗಳಿಗೆ ಬಡ್ತಿ ನೀಡಲು ಅಧಿಸೂಚನೆ ಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಸಿಬ್ಬಂದಿ ಸಮಸ್ಯೆ ಪರಿಹರಿಸಲು ಸಮಗ್ರ ಪೋರ್ಟಲ್‌ ಶೀಘ್ರದಲ್ಲಿ ಲಾಂಚ್

ಉನ್ನತ ಶಿಕ್ಷಣ ಇಲಾಖೆಯ ಬೋಧಕ, ಬೋಧಕೇತರ ಸಿಬ್ಬಂದಿಗಳ ಕುಂದುಕೊರತೆಗಳನ್ನು ಸುಲಭವಾಗಿ ಪರಿಹರಿಸಲು ಸಮಗ್ರ ಪೋರ್ಟಲ್‌ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದನ್ನು 'ಸುಶಾಸನ ದಿನ'ವಾದ ಡಿ.25ರಂದು ಉದ್ಘಾಟಿಸಲು ಸಿದ್ಧತೆಗಳು ನಡೆಯುತ್ತಿವೆ.

ಇಲಾಖೆಯ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಆದಷ್ಟೂ ಮಟ್ಟಿಗೆ ನ್ಯಾಯಾಲಯದ ಹೊರಗೆಯೇ ನಿವಾರಿಸಲು ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಇದರ ಭಾಗವಾಗಿ ಪೋರ್ಟಲ್‌ ಸಿದ್ಧಪಡಿಸಲಾಗುತ್ತಿದೆ. ಇದರಲ್ಲಿ ಸರಳವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಕುಂದುಕೊರತೆಗಳನ್ನು ಆಲಿಸಿ, ಪಿಂಚಣಿ, ಬಡ್ತಿ, ನಿಯೋಜನೆ, ವರ್ಗಾವಣೆ ಮುಂತಾದ ವಿಚಾರಗಳನ್ನು ಸುಲಭವಾಗಿ ಬಗೆಹರಿಸುವ ವ್ಯವಸ್ಥೆಯನ್ನು ಇದು ಕಲ್ಪಿಸಲಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದರು.

ಇಲಾಖೆಯಲ್ಲಿ ಸುಶಾಸನದ ಅತ್ಯುತ್ತಮ ಅಂಶಗಳೆಲ್ಲವೂ ಜಾರಿಗೆ ಬರಬೇಕು. ಕಳೆದ ಮೂರು ವರ್ಷಗಳಲ್ಲಿ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳನ್ನು ಸಾಕಷ್ಟು ಸುಧಾರಿಸಲಾಗಿದೆ. ಈಗಂತೂ ಆಯಾ ಕಾಲೇಜುಗಳಲ್ಲಿ ಸಂಗ್ರಹವಾಗುವ ಹಣವನ್ನು ಆಯಾ ಕಾಲೇಜುಗಳಿಗೇ ನೀಡಲಾಗುತ್ತಿದೆ. ಈ ಮೂಲಕ ಆರ್ಥಿಕ ಸ್ವಾತಂತ್ರ, ಪಾರದರ್ಶಕತೆ ಮತ್ತು ಹೆಚ್ಚಿನ ಉತ್ತರದಾಯಿತ್ವಗಳನ್ನು ರೂಢಿಗೆ ತರಲಾಗಿದೆ ಎಂದು ಅಶ್ವತ್ಥನಾರಾಯಣ ಇತ್ತೀಚೆಗೆ ಹೇಳಿದ್ದರು.

.

What's Your Reaction?

like

dislike

love

funny

angry

sad

wow